ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ……..ಮುಂದೆ ಓದಿ…..
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸಕ್ತ ವರ್ಷ 75 ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 100 ಉಪ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಈಗ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಕೃಷಿಗೆ 18 ರಿಂದ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಅಗತ್ಯವಿದೆ. ರಾಜ್ಯದ ಹಲವೆಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಿ ಅದಕ್ಕೆ ಸೋಲಾರ್ ಅಳವಡಿಸುವುದರಿಂದ ಭವಿಷ್ಯದಲ್ಲಿ ವಿದ್ಯುತ್ ಕೊರತೆಯ ಸಮಸ್ಯೆ ಬಗೆಹರಿಸಬಹುದು ಎಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel