ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಖಾದಿ ಚಟುವಟಿಕೆ ಉತ್ತೇಜಿಸಲು ಖಾದಿ ಮಂಡಳಿ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಆರಂಭಗೊಂಡ ರಾಜ್ಯ ಮಟ್ಟದ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಖಾದಿ ಚಟುವಟಿಕೆ ಇಲ್ಲದ ಈ ಐದು ಜಿಲ್ಲೆಗಳಲ್ಲಿ ಆಸಕ್ತ ಸಂಸ್ಥೆಗಳು ನೋಂದಣಿಯಾದಲ್ಲಿ ಖಾದಿ ಉತ್ಪಾದನೆ ಅಗತ್ಯವಿರುವ ಚರಕ ಮತ್ತು ಮಗ್ಗಗಳ ಖರೀದಿಗೆ ಸಹಕಾರ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಖಾದಿ ಉತ್ಪನ್ನದ ಗುಣಮಟ್ಟ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಲು ರಾಜ್ಯದಲ್ಲಿ ಟೆಕ್ಸ್‌ಟೈಲ್ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ನೀಡುತ್ತಿರುವ 3 ಕಾಲೇಜುಗಳಿಗೆ ಸಂಶೋಧನ ನೆರವು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




