ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಈ ಪ್ರಕರಣ ಸವೋಚ್ಚ ನ್ಯಾಯಾಲಯದಲ್ಲಿದೆ. ಈಗ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧ ತೆರವಿಗೆ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದೇ ವೇಳೆ ರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ದರ ಕಡಿಮೆ ಇದೆ. ರೈತರಿಗೆ ನೆರವಾಗಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel