ಎಪ್ರಿಲ್ 1 ರಿಂದ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆಯ ಹಣವನ್ನು ರೈತರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಹೈನುಗಾರರು ಕೂಡಾ ಹಾಲಿನ ದರ ಏರಿಕೆಯ ನಿರೀಕ್ಷೆಯಲ್ಲಿದ್ದರು. ಕೋಲಾರ ಜಿಲ್ಲೆ ಹೈನೋದ್ಯಮದಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಲಕ್ಷಾಂತರ ಜನ ಹಾಲು ಉತ್ಪಾದಕರಿದ್ದಾರೆ. ಪ್ರತಿನಿತ್ಯ ಕೋಲಾರ ಹಾಲು ಒಕ್ಕೂಟದಲ್ಲಿ ಸರಾಸರಿ ಸುಮಾರು 7 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹೀಗಾಗಿ ಹೈನುಗಾರರು ಕೂಡಾ ಹಾಲಿನ ಬೆಲೆ ಏರಿಕೆಯ ಬಗ್ಗೆ ಧ್ವನಿ ಎತ್ತಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel