ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು ಉತ್ಪನ್ನವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ನೊಂದಣಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಗಂಗಾಧರಸ್ವಾಮಿ ತಿಳಿಸಿದ್ದಾರೆ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಡಲೆಕಾಳಿಗೆ ಪ್ರತಿ ಕ್ವಿಂಟಾಲ್‌ಗೆ 5650 ರೂಪಾಯಿ ನಿಗದಿಪಡಿಸಲಾಗಿದೆ. ಜಗಳೂರು ಮತ್ತು ಚನ್ನಗಿರಿ ಎಪಿಎಂಸಿ ಆವರಣದಲ್ಲಿ ರೈತರ ನೊಂದಣಿ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel