MIRROR FOCUS

2ನೇ ಹೆಚ್ಚುವರಿ ಭಾಷೆಯಾಗಿ ತುಳುವನ್ನು ಘೋಷಿಸಿ | ತುಳುವಿನಲ್ಲೇ ಸ್ಪೀಕರ್‌ಗೆ ಮನವಿ‌ ಮಾಡಿದ ಶಾಸಕ ಅಶೋಕ್ ರೈ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅವಿಭಜಿತ ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಯ ಕೆಲವು ತಾಲೂಕುಗಳನ್ನು ತುಳುನಾಡು(Tulunadu) ಎನ್ನಲಾಗುತ್ತದೆ. ಇಲ್ಲಿನ ಬಹುತೇಕ ಮಂದಿ ತುಳು ಭಾಷೆಯನ್ನು(Tulu language) ಮಾತನಾಡುತ್ತಿದ್ದಾರೆ. ಇತ್ತೀಚೆಗೆ ತುಳು ಲಿಪಿ(Tulu inscription) ಕಲಿಯುವ ಅಭಿಯಾನವೂ ಆರಂಭವಾಗಿದೆ. ಹಲವು ದಶಕಗಳಿಂದ ತುಳು ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸಬೇಕು ಅನ್ನುವುದು ತುಳುವರ ಕೂಗು. ಆದರೆ ಅದು ಇದುವರೆಗೆ ಸಾಧ್ಯವಾಗಿಲ್ಲ. ಇದೀಗ ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಒತ್ತಾಯಿಸಿದರು. ತುಳುವಲ್ಲೇ ಮಾತನಾಡಿದ ಅಶೋಕ್ ರೈ (Ashok Kumar Rai) ಅವರು ಸದನದಲ್ಲಿ ಮನವಿ ಮನವಿ ಮಾಡಿದ್ದರು. ಆ ಕಡೆಯಿಂದ ಸ್ಪೀಕರ್ ಯು.ಟಿ ಖಾದರ್‌ (UT Khader) ಕೂಡ ತುಳುವಿನಲ್ಲೇ ಉತ್ತರ ಕೊಟ್ಟರು.

Advertisement

ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನಮಗೆ ನಿಮ್ಮ ಭಾಷೆ ಹೇಗೆ ಗೊತ್ತಾಗಬೇಕು? ಅಂತ ಹಲವು ಶಾಸಕರು ತಮಾಷೆಗೆಳೆದ ಪ್ರಸಂಗವೂ ಸದನದಲ್ಲಿ ನಡೆಯಿತು. ನೀವು ಏನು ಹೇಳಿದ್ರಿ‌ ನಮಗೆ ಗೊತ್ತಾಗಲಿಲ್ಲ. ನಾವೇನು ಮಂಗಳೂರಿನ (Mangaluru) ಅಧಿವೇಶನದಲ್ಲಿ ಇದ್ದೇವಾ? ಅಂತಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashoka) ಜೋರಾಗಿ ನಕ್ಕು, ಕನ್ನಡದಲ್ಲಿ ಮಾತನಾಡಿ ಎಂದರು. ಈ ವೇಳೆ ವೇದವ್ಯಾಸ ಕಾಮತ್‌ ರಿಂದಲೂ (Veda Vyasa Kamath) ತುಳು ಸಂಭಾಷಣೆ ನಡೆಯಿತು. ಶಾಸಕ ಅಶೋಕ್ ರೈ ಹೇಳಿದಂತೆ 2ನೇ ಅಧಿಕೃತ ಭಾಷೆ ಮಾಡಿ ಎಂದು ಸದನದಲ್ಲಿ ಕೈಮುಗಿದು ಮನವಿ ಮಾಡಿದರು.

ಇದರಿಂದ ತಂಗಡಗಿ ಅನುಪಸ್ಥಿತಿಯಲ್ಲಿ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಬೇರೆ ರಾಜ್ಯಗಳಲ್ಲಿ ಎರಡು ಭಾಷೆಗಳಿವೆ. ಬಿಹಾರದಲ್ಲೂ ಎರಡು ಭಾಷೆಗಳಿವೆ, ಸ್ವಂತ ಖರ್ಚಿನಲ್ಲಿ ಅಧ್ಯಯನ ಮಾಡಿ ತಂದಿದ್ದಾರೆ. ತುಳು ಭಾಷೆಯ ಪ್ರಾಚೀನತೆ ಇತಿಹಾಸ ಗಮನಕ್ಕಿದೆ. ನನ್ನ ಬಾಲ್ಯ ಸ್ನೇಹಿತ ಶ್ರವಣ್ ಅನ್ನುವವರಿದ್ದರು. ಅವರಿಗೆ ಅವರ ತಾಯಿ ತುಳುವಿನಲ್ಲೇ ಬೈಯ್ಯುತ್ತಿದ್ರು. ಹಾಗಾಗಿ ನೀವೇನು ಹೇಳಿದ್ರಿ ನನಗೂ ಅರ್ಥವಾಗಿದೆ. ನಾನು ಇದರ ಪರವಾಗಿದ್ದೇನೆ. ನಾಳೆಯೇ ಸಚಿವರ ಗಮನಕ್ಕೆ ತರುತ್ತೇನೆ. ಸಭೆ ಮಾಡಿ ನಿರ್ಧಾರ ಮಾಡ್ತೇವೆ, ಅಂತ ಸದನಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದರು. ಈ ವೇಳೆ ಲಂಬಾಣಿಯನ್ನೂ ಸೇರಿಸುವಂತೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮನವಿ ಮಾಡಿದರು. 8ನೇ ಪರಿಚ್ಚೇದಕ್ಕೆ ಸೇರಿಸಲು ಮನವಿ‌ ಮಾಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

4 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

4 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

4 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

4 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

12 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

12 hours ago