ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆ

December 11, 2025
11:00 PM

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು ಖುಷಿಯ ಸಂಗತಿಯಾಗಿದೆ. 2023-24 ರಲ್ಲಿ 1254 ಪ್ರಕರಣ, 2024-25 ರಲ್ಲಿ 1178    ಪ್ರಕರಣ ಹಾಗೂ 2025-26 ರಲ್ಲಿ ನವೆಂಬರ್ ವರೆಗೆ ಒಟ್ಟು 377 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯ ಕೇಶವಪ್ರಸಾದ್‌ ಅವರು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದಿರುವ ರೈತ ಆತ್ಮಹತ್ಯೆಯ ಬಗ್ಗೆ ಕೇಳಿರುವ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದ್ದರು. 2023-24 ರಲ್ಲಿ ಬೆಳಗಾವಿ, ಹಾವೇರು, ಧಾರವಾಡ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25 ರಲ್ಲಿ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ ಇದುವರೆಗೆ ಬೆಳಗಾವಿಯಲ್ಲಿ 36, ಕಲಬುರಗಿಯಲ್ಲಿ 4o, ಹಾವೇರಿಯಲ್ಲಿ 35  ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ, ಕೋಲಾರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ತೀರಾ ಕಡಿಮೆ ಇದೆ.  ಬಹುತೇಕ ಕಡೆಗಳಲ್ಲಿ ಸಾಲಬಾಧೆ ಹಾಗೂ ಇತರ ಸಮಸ್ಯೆ ಹೇಳಲಾಗಿದೆ. ಸಾಲಬಾಧೆಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರವಾಗಿ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ ಎಲ್ಲಾ ತನಿಖೆಗಳನ್ನು ನಡೆಸಿ ಈ ಪರಿಹಾರವನ್ನು ವಿಲೇವಾರಿ ಮಾಡಲಾಗುತ್ತಿದೆ. ರೈತರು ಸಾಲಬಾಧೆಯಿಂದ ಬಳಲುತ್ತಿದ್ದರೆ ಇಲಾಖೆಗಳು ಖುದ್ದಾಗಿ ರೈತನ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಇಲಾಖೆಯು ಉತ್ತರದಲ್ಲಿ ತಿಳಿಸಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror