ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು ಖುಷಿಯ ಸಂಗತಿಯಾಗಿದೆ. 2023-24 ರಲ್ಲಿ 1254 ಪ್ರಕರಣ, 2024-25 ರಲ್ಲಿ 1178 ಪ್ರಕರಣ ಹಾಗೂ 2025-26 ರಲ್ಲಿ ನವೆಂಬರ್ ವರೆಗೆ ಒಟ್ಟು 377 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ವಿಧಾನಪರಿಷತ್ ಕಲಾಪದಲ್ಲಿ ಸದಸ್ಯ ಕೇಶವಪ್ರಸಾದ್ ಅವರು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದಿರುವ ರೈತ ಆತ್ಮಹತ್ಯೆಯ ಬಗ್ಗೆ ಕೇಳಿರುವ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದ್ದರು. 2023-24 ರಲ್ಲಿ ಬೆಳಗಾವಿ, ಹಾವೇರು, ಧಾರವಾಡ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25 ರಲ್ಲಿ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ ಇದುವರೆಗೆ ಬೆಳಗಾವಿಯಲ್ಲಿ 36, ಕಲಬುರಗಿಯಲ್ಲಿ 4o, ಹಾವೇರಿಯಲ್ಲಿ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ, ಕೋಲಾರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ತೀರಾ ಕಡಿಮೆ ಇದೆ. ಬಹುತೇಕ ಕಡೆಗಳಲ್ಲಿ ಸಾಲಬಾಧೆ ಹಾಗೂ ಇತರ ಸಮಸ್ಯೆ ಹೇಳಲಾಗಿದೆ. ಸಾಲಬಾಧೆಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರವಾಗಿ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ ಎಲ್ಲಾ ತನಿಖೆಗಳನ್ನು ನಡೆಸಿ ಈ ಪರಿಹಾರವನ್ನು ವಿಲೇವಾರಿ ಮಾಡಲಾಗುತ್ತಿದೆ. ರೈತರು ಸಾಲಬಾಧೆಯಿಂದ ಬಳಲುತ್ತಿದ್ದರೆ ಇಲಾಖೆಗಳು ಖುದ್ದಾಗಿ ರೈತನ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಇಲಾಖೆಯು ಉತ್ತರದಲ್ಲಿ ತಿಳಿಸಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…