ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ

June 6, 2025
9:39 PM

ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂಕೋರ್ಟ್‌ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ಮತ್ತು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅವರು, ವಸತಿ ಪ್ರದೇಶ, ಪಟ್ಟಾಭೂಮಿ ಇತ್ಯಾದಿ ಇರುವ ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ ‌4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಿ ಈ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.   ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980 ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್‌ಗೆ ಮನವಿ ಮಾಡುವುದು ಅನಿವಾರ್ಯ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror