ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂಕೋರ್ಟ್‌ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ಮತ್ತು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅವರು, ವಸತಿ ಪ್ರದೇಶ, ಪಟ್ಟಾಭೂಮಿ ಇತ್ಯಾದಿ ಇರುವ ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಿ ಈ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980 ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್‌ಗೆ ಮನವಿ ಮಾಡುವುದು ಅನಿವಾರ್ಯ ಎಂದು ತಿಳಿಸಿದರು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…