ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು(Deepavali) ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ಉದ್ದೇಶದಿಂದ ಸಮಾನ ಮನಸ್ಕರು ಮಂಗಳೂರು (Mangalore) ಇದರ ಆಶ್ರಯದಲ್ಲಿ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು.
ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ, ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್‌ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್ ಮುಂತಾದವರು ಹಾಜರಿದ್ದರು.
ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು ಮಾಡುವ ವಿಧಾನ : ದೋಸೆ ಹಿಟ್ಟು,…
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…