ದೀಪಾವಳಿ | ಹೆಚ್ಚು ಶಬ್ದದ ಪಟಾಕಿ, ಸಿಡಿಮದ್ದು ಉಪಯೋಗಿಸದಂತೆ ಸಲಹೆ

October 20, 2022
9:10 PM

ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ  ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರನ್ವಯ ಹಾಗೂ ಸುಪ್ರೀಂ ಕೋರ್ಟ್‍ನ ಆದೇಶ ಡಬ್ಲ್ಯೂ.ಪಿ(ಸಿ)72/98, 2005ರ ಜುಲೈ 21ರ ಪ್ರಕಾರ 125 ಡಿ.ಬಿ(ಎ.ಐ) ಅಥವಾ 145 ಡಿ.ಬಿ(ಸಿ)ಪಿಕೆ ಕ್ಕಿಂತ (ಪಟಾಕಿ ಸಿಡಿಸುವ ಸ್ಥಳದಿಂದ 4ಮೀ. ಅಂತರದಲ್ಲಿ)  ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ  ಸಿಡಿಮದ್ದುಗಳ ಮಾರಾಟ ಮತ್ತು ಉಪಯೋಗವನ್ನು ನಿಷೇಧಿಸಲಾಗಿದೆ.

Advertisement
Advertisement

ಆದ ಕಾರಣ ಸಾರ್ವಜನಿಕರು 125ಡಿ.ಬಿ(ಎ.ಐ) ಅಥವಾ 145 ಡಿ.ಬಿ(ಸಿ)ಪಿ.ಕೆ ಕ್ಕಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ  ನಿಷೇಧಿತ ಪಟಾಕಿ, ಸಿಡಿಮದ್ದು ಬಳಸಬಾರದು. ಸುಪ್ರೀಂ ಕೋರ್ಟ್ ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಫೋಟದಿಂದ ಅಪಾಯಗಳಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಸಿಡಿಸಬೇಕು.

ಅಲ್ಲದೇ ಸಾರ್ವಜನಿಕರಲ್ಲಿ ದೀಪಾವಳಿ ಹಬ್ಬವನ್ನು ಸಿಡಿಮದ್ದು, ಪಟಾಕಿಗಳನ್ನು ಉಪಯೋಗಿಸದೇ ದೀಪದ ಹಬ್ಬವನ್ನಾಗಿ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group