ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.
ದೀಪಾವಳಿ ಸಂದರ್ಭ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.
ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ ಏರಿಕೆಯಾಗಿದ್ದು, ಈ ವರ್ಷ 100 ರಿಂದ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…