Advertisement
ಸುದ್ದಿಗಳು

ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

Share

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

10 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

12 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

15 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago