ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.
ಈ ನಡುವೆಯೇ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದೆ.
ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
40% ಕಮಿಷನ್‌ನಲ್ಲಿ ನೀಡಿದ ಹಣವೇ?
40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ?
ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?@BSBommai ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು.#SayCM— Karnataka Congress (@INCKarnataka) October 28, 2022
ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.