ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |

October 28, 2022
8:27 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ  ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್‌ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.

ಈ ನಡುವೆಯೇ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು,  ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?  ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್‌ ಮಾಡಿದೆ.

ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್‌ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror