ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.
ಈ ನಡುವೆಯೇ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದೆ.
ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ…
ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು,…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
View Comments
ಇದು ನಿಜವೇ ಆಗಿದ್ದರೆ ಬಹಳ ಅನ್ಯಾಯ ಮಾಡ್ತಾ ಇದೆ ಈ ಸರಕಾರ ಎಸ್ಸಿ ಎಸ್ಟಿ ಗಳಿಗೆ ಮೀಸಲಾತಿ ಹೆಚ್ಚಿಸಿದ್ದೇವೆ ಅಂತ ಹೇಳಿಕೊಂಡು ದಲಿತ ಮಕ್ಕಳ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲಿಯೇ ಮುಂದೆ ಬರದ ಹಾಗೆ ಮೊಳಕೆಯಲ್ಲಿ ಚಿವುಟ್ತಾಯಿದೆ. ಯಾಕೆಂದ್ರೆ ಸರಕಾರಿ ಶಾಲೆ ಕಾಲೇಜುಗಳಲ್ಲಿ ಪಾಪದ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಕೊಡದೆ ಅವರ ಬದುಕನ್ನು ನಿರ್ನಾಮ ಮಾಡ್ತಾ ಇದ್ದಾರೆ ಭವಿಷ್ಯದಲ್ಲಿ ಗುಲಾಮರನ್ನಾಗಿಸುವ ಹುನ್ನಾರ ಇದು. ಸುಳ್ಳು ವಂಚನೆ ಮೋಸ ಮಾಡಿ ಆದರೂ ಸರಕಾರ ನಡೆಸಬೇಕೇ..?ಹಿಂದುರಾಷ್ಟ್ರದಲ್ಲಿ ಶ್ರೀಮಂತರು ಮತ್ತು ಉನ್ನತ ವರ್ಗದವರು ಮಾತ್ರ ಬದುಕಬೇಕಾ ಇದು ನಮ್ಮ ದಲಿತ ಸಮುದಾಯ ಮತ್ತು ಶೂದ್ರ ಸಮುದಾಯ ಅರ್ಥ ಮಾಡಿಕೊಳ್ಳಬೇಕಾಗಿದೆ.