Advertisement
ಸುದ್ದಿಗಳು

ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ  ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್‌ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.

ಈ ನಡುವೆಯೇ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು,  ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?  ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್‌ ಮಾಡಿದೆ.

ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್‌ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ನಿಜವೇ ಆಗಿದ್ದರೆ ಬಹಳ ಅನ್ಯಾಯ ಮಾಡ್ತಾ ಇದೆ ಈ ಸರಕಾರ ಎಸ್ಸಿ ಎಸ್ಟಿ ಗಳಿಗೆ ಮೀಸಲಾತಿ ಹೆಚ್ಚಿಸಿದ್ದೇವೆ ಅಂತ ಹೇಳಿಕೊಂಡು ದಲಿತ ಮಕ್ಕಳ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲಿಯೇ ಮುಂದೆ ಬರದ ಹಾಗೆ ಮೊಳಕೆಯಲ್ಲಿ ಚಿವುಟ್ತಾಯಿದೆ. ಯಾಕೆಂದ್ರೆ ಸರಕಾರಿ ಶಾಲೆ ಕಾಲೇಜುಗಳಲ್ಲಿ ಪಾಪದ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಕೊಡದೆ ಅವರ ಬದುಕನ್ನು ನಿರ್ನಾಮ ಮಾಡ್ತಾ ಇದ್ದಾರೆ ಭವಿಷ್ಯದಲ್ಲಿ ಗುಲಾಮರನ್ನಾಗಿಸುವ ಹುನ್ನಾರ ಇದು. ಸುಳ್ಳು ವಂಚನೆ ಮೋಸ ಮಾಡಿ ಆದರೂ ಸರಕಾರ ನಡೆಸಬೇಕೇ..?ಹಿಂದುರಾಷ್ಟ್ರದಲ್ಲಿ ಶ್ರೀಮಂತರು ಮತ್ತು ಉನ್ನತ ವರ್ಗದವರು ಮಾತ್ರ ಬದುಕಬೇಕಾ ಇದು ನಮ್ಮ ದಲಿತ ಸಮುದಾಯ ಮತ್ತು ಶೂದ್ರ ಸಮುದಾಯ ಅರ್ಥ ಮಾಡಿಕೊಳ್ಳಬೇಕಾಗಿದೆ.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

15 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

22 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

22 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

22 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

2 days ago