ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ

November 1, 2026
7:46 AM
ದೀಪಾವಳಿ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಸರ್ಕಾರದ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಪಟಾಕಿ ಅಂಗಡಿ ತೆರೆಯಲು ಜಿಲ್ಲಾಧಿಕಾರಿಗಳ ಪರವಾನಗಿ ಕಡ್ಡಾಯವಾಗಿದ್ದು, ನಿಯಮಾನುಸಾರ ಅರ್ಜಿಗಳನ್ನು ಪರಿಶೀಲಿಸಿ ಪರವಾನಗಿ ನೀಡಲಾಗುತ್ತದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗದಂತೆ ಪಟಾಕಿ ಮಾರಾಟಗಾರರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದಾವಣಗೆರೆ ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ.

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟಾಕಿ ಮಾರಾಟದ ಅಂಗಡಿಗಳು ಮತ್ತು ಘಟಕಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಪರವಾನಗಿ ಇಲ್ಲದೆ ಪಟಾಕಿ ಮಾರಾಟಕ್ಕೆ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಿಯಮಾನುಸಾರ ಪರವಾನಗಿ ವಿತರಣೆ :  ದಾವಣಗೆರೆ, ಹರಿಹರ, ಮಾಯಕೊಂಡ ಮತ್ತು ಜಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಪರವಾನಗಿ ವಿತರಿಸಲಾಗುವುದು ಎಂದು ಸಂತೋಷ್ ಕುಮಾರ್ ತಿಳಿಸಿದರು.

ಪಟಾಕಿ ಮಾರಾಟಗಾರರು ಸುರಕ್ಷತಾ ನಿಯಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.

ದೀಪಾವಳಿ ಸಂದರ್ಭದಲ್ಲಿ ಸುರಕ್ಷಿತ ಹಬ್ಬದ ಆಚರಣೆಗೆ ಸಾರ್ವಜನಿಕರು ಹಾಗೂ ಪಟಾಕಿ ವ್ಯಾಪಾರಿಗಳು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Davangere Sub-Divisional Officer Santosh Kumar has instructed firecracker sellers to sell only green crackers during the Deepavali festival and strictly follow government safety regulations. He said that obtaining a licence from the Deputy Commissioner’s office is mandatory for opening firecracker shops and units. Applications from Davangere, Harihar, Mayakonda, Jagalur and other locations will be examined and licences issued in accordance with the prescribed rules.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ
November 1, 2026
8:00 AM
by: ದ ರೂರಲ್ ಮಿರರ್.ಕಾಂ
45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ
November 1, 2026
7:55 AM
by: ದ ರೂರಲ್ ಮಿರರ್.ಕಾಂ
ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್
October 31, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror