ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗದಂತೆ ಪಟಾಕಿ ಮಾರಾಟಗಾರರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದಾವಣಗೆರೆ ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ.
ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಟಾಕಿ ಮಾರಾಟದ ಅಂಗಡಿಗಳು ಮತ್ತು ಘಟಕಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಪರವಾನಗಿ ಇಲ್ಲದೆ ಪಟಾಕಿ ಮಾರಾಟಕ್ಕೆ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ನಿಯಮಾನುಸಾರ ಪರವಾನಗಿ ವಿತರಣೆ : ದಾವಣಗೆರೆ, ಹರಿಹರ, ಮಾಯಕೊಂಡ ಮತ್ತು ಜಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಪರವಾನಗಿ ವಿತರಿಸಲಾಗುವುದು ಎಂದು ಸಂತೋಷ್ ಕುಮಾರ್ ತಿಳಿಸಿದರು.
ಪಟಾಕಿ ಮಾರಾಟಗಾರರು ಸುರಕ್ಷತಾ ನಿಯಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.
ದೀಪಾವಳಿ ಸಂದರ್ಭದಲ್ಲಿ ಸುರಕ್ಷಿತ ಹಬ್ಬದ ಆಚರಣೆಗೆ ಸಾರ್ವಜನಿಕರು ಹಾಗೂ ಪಟಾಕಿ ವ್ಯಾಪಾರಿಗಳು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
Davangere Sub-Divisional Officer Santosh Kumar has instructed firecracker sellers to sell only green crackers during the Deepavali festival and strictly follow government safety regulations. He said that obtaining a licence from the Deputy Commissioner’s office is mandatory for opening firecracker shops and units. Applications from Davangere, Harihar, Mayakonda, Jagalur and other locations will be examined and licences issued in accordance with the prescribed rules.
ಹೈನುಗಾರರ ನಷ್ಟ ತಡೆಯಲು ಮತ್ತು ಉತ್ಪಾದನೆ ಹಾಗೂ ಸಾಗಾಣಿಕೆ ವೆಚ್ಚದ ಏರಿಕೆಯನ್ನು ಸರಿದೂಗಿಸಲು…
ದೀಪಾವಳಿ ಹಿನ್ನೆಲೆಯಲ್ಲಿ ಸಾಲಿಗ್ರಾಮದ ನರಹರಿ ಶೆಣೈ ಅವರು ತಯಾರಿಸುವ ಪರಿಸರ ಸ್ನೇಹಿ ಸಾಂಪ್ರದಾಯಿಕ…
ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ…
ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು…
ಮಣ್ಣಿನ ಫಲವತ್ತತೆ ಮತ್ತು ಮಾನವ ಆರೋಗ್ಯ ಕಾಪಾಡಲು ರೈತರು ಸಾವಯವ ಕೃಷಿಗೆ ಆದ್ಯತೆ…
ಎತ್ತರದ ಅಡಿಕೆ ತೋಟಗಳಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಿಸಲು ಐಸಿಎಆರ್–ಸಿಪಿಸಿಆರ್‌ಐ ವಿಜ್ಞಾನಿಗಳು ವೈಜ್ಞಾನಿಕ…