#Deepavali | ಇನ್ನು ಮುಂದೆ ಅಮೇರಿಕಾದಲ್ಲೂ ದೀಪಾವಳಿ ಹಬ್ಬಕ್ಕೆ ರಜೆ | ಶಾಲೆಗಳಿಗೆ ಅಧಿಕೃತ ರಜೆ ಘೋಷಿಸಿದ ನ್ಯೂಯಾರ್ಕ್​ |

June 27, 2023
11:16 AM

ದೀಪಾವಳಿ ಹಬ್ಬ ಅಂದ್ರೆ ನಮ್ಮ ದೇಶದೆಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸುವ ಹಬ್ಬ. ಇಡೀ ದೇಶಕ್ಕೆ ದೇಶವೇ ಈ ದಿನ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿ ಹಬ್ಬ ಮಾಡಲಾಗುತ್ತದೆ. ಇದೀಗ ನ್ಯೂಯಾರ್ಕ್​ ನಗರದಲ್ಲಿ ದೀಪಾವಳಿ #Deepavali ಹಬ್ಬಕ್ಕೆ ಶಾಲೆಗಳಿಗೆ ರಜೆ ಘೊಷಿಸುವ ಮೂಲಕ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಈ ಹಿಂದೆ 2021 ಮತ್ತು 2022ರಲ್ಲಿ ಎರಡು ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಲಾಗಿತ್ತು. ಎರಡೂ ವಿಫಲವಾಗಿತ್ತು. ಈ ಮಸೂದೆಯನ್ನು ವಿಧಾನಸಭೆಯ ಸದಸ್ಯೆ ಜೆನಿಫರ್ ರಾಜ್‌ಕುಮಾರ್ ಮಂಡಿಸಿ, ಮಸೂದೆ ಅಂಗೀಕಾರವಾದಾಗ ದಕ್ಷಿಣ ಏಷ್ಯಾದ ಸಮುದಾಯದ ಕನಸನ್ನು ನನಸು ಮಾಡಿದೆ ಎಂದು ಹೇಳಿದ್ದರು.

ಹಲವು ವರ್ಷಗಳಿಂದ ನ್ಯೂಯಾರ್ಕ್​ನಲ್ಲಿ ದೀಪಾವಳಿ ಹಬ್ಬಕ್ಕೆ ರಜೆ ಘೊಷಿಸಬೇಕು ಎನ್ನುವ ಒತ್ತಾಯವಿತ್ತು. ವೈಟ್ ಹೌಸ್ ನಲ್ಲೂ ಈ ಹಿಂದೆ ದೀಪಾವಳಿ ಆಚರಿಸಲಾಗಿತ್ತ. ಕತ್ತಲೆ ಮೇಲೆ ಬೆಳಕಿನ ವಿಜಯದ ಸಂಕೇತ ದೀಪಾವಳಿ ಎಂದು ಮೇಯರ್ ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳು ಯುಎಸ್ ಕಾಂಗ್ರೆಸ್ ಮಹಿಳೆ ಗ್ರೇಸ್ ಮೆಂಗ್ ಅವರು ದೀಪಾವಳಿಯನ್ನು ಫೆಡರಲ್ ರಜಾದಿನವೆಂದು ಘೋಷಿಸುವ ಮಸೂದೆಯನ್ನು ಮಂಡಿಸಿದರು. ಒಂದು ವೇಳೆ ಜಾರಿಗೆ ಬಂದರೆ, ದೀಪಾವಳಿ ಅಮೆರಿಕದಲ್ಲಿ 12 ನೇ ಫೆಡರಲ್ ಮಾನ್ಯತೆ ಪಡೆದ ರಜಾದಿನವಾಗುತ್ತದೆ ಎಂದು ವರದಿ ಹೇಳಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror