ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭರ್ಜರಿ ಅಲ್ಲದಿದ್ರು ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರ ಈಗಲೂ ಮಳೆಯ ಪ್ರಮಾಣ ಕಡಿಮೆಯಿದೆ. ಇದೇ ವೇಳೆ ರಾಜ್ಯದಲ್ಲಿ ಶೇಕಡಾ 32ರಷ್ಟು ಮಳೆಯ ಕೊರತೆಯಾಗಿದೆ ಎಂಬ ವರದಿ ಹೊರಬಿದ್ದಿದೆ.
ವರದಿಗಳ ಪ್ರಕಾರ ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂಟಿ ಮೀಟರ್ ಮಳೆಯಾಗಿದೆ. ಆದರೆ ಈ ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪ್ರಮಾಣ 35.35 ಸೆಂ.ಮೀ ಆಗಿತ್ತು. ರಾಜ್ಯದಲ್ಲಿ ಅತೀ ಹೆಚ್ಚು ಮಳೆಯ ಕೊರತೆಯಾದ ಜಿಲ್ಲೆಯನ್ನು ಗಮನಿಸುವುದಾರೆ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.
ಕರ್ನಾಟಕದ 13 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ದಾಖಲಾಗಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರದ ಪುಣೆ, ಪಾಲ್ಘರ್, ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೀಗಾಗಿ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…