#PMFBY | ಬೆಳೆ ವಿಮೆ ಪ್ರೀಮಿಯಂ ಪಾವತಿ | ಅಧಿಕಾರಿಗಳ ಬೇಜವಾಬ್ದಾರಿ | ರೈತರಿಗೆ ನಷ್ಟದ ಆರೋಪ |

June 23, 2023
10:58 PM

ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.‌30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.

Advertisement
Advertisement
Advertisement

ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Advertisement

ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು.‌ ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ
ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ
November 25, 2024
8:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror