ದೀಪಾವಳಿ ಹಬ್ಬದಂದು ದೆಹಲಿಯಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ.
Advertisement
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.
Advertisement
ಸೆಪ್ಟೆಂಬರ್ ನಲ್ಲಿ, ನಗರಾಡಳಿತವು ದೀಪಾವಳಿ ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿದೆ.
ಕಳೆದ ಎರಡು ವರ್ಷಗಳಿಂದ ಇದೇ ಪದ್ಧತಿಯನ್ನು ಅನುಸರಿಸಲಾಗುತ್ತಿದೆ. ಅಕ್ಟೋಬರ್ 21 ರಂದು ‘ದಿಯೇ ಜಲವೋ ಪತಾಖೆ ನಹಿ” ಎಂಬ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುವುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement