ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕಳೆದ ರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಈ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಭದ್ರತಾ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸಿದ್ದಾರೆ. ರಷ್ಯಾದ ಮಾಸ್ಕೋದಿಂದ ವಿಮಾನ ಇಂದು ಬೆಳಗಿನ ಜಾವ 3:20ಕ್ಕೆ ದೆಹಲಿ ತಲುಪಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ಕ್ಕೆ ಬರುತ್ತಿದ್ದ ಈ ವಿಮಾನದಲ್ಲಿ ಬಾಂಬ್ ಇರುವುದಾಗಿ ಈ ಮುಂದೆಯೇ ಇಮೇಲ್ ಬಂದಿತ್ತು.
ಹೀಗಾಗಿ ಕೂಡಲೇ ಮುನ್ನೆಚ್ಚರಿಕೆ ವಹಿಸಲಾಯಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ವಿಮಾನದಲ್ಲಿದ್ದ 386 ಪ್ರಯಾಣಿಕರು ಹಾಗೂ 16 ಸಿಬ್ಬಂದಿಯನ್ನು ಕೆಳಗಿಳಿಸಲಾಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…