ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆಗೆ ಉಭಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವೂ ಅಡಕವಾಗಿರುವುದರಿಂದ ಆಯ್ಕೆ ಕಗ್ಗಂಟಾಗುತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕೆಲ ನಿರ್ದಿಷ್ಟ ಹೆಸರುಗಳ ಬಗ್ಗೆ ಪಟ್ಟು ಹಿಡಿದಿದ್ದರಿಂದ 28 ಮಂದಿಯ ಬದಲಾಗಿ ಕೇವಲ 8 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಬಾರಿ ಇಂತಹ ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕೆ ರಾಜ್ಯಕ್ಕೆ ಮಂಗಳವಾರವೇ ಆಗಮಿಸಿರುವ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಉಭಯ ನಾಯಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.