Advertisement
MIRROR FOCUS

ದೆಹಲಿ ಚಲೋ | ಪ್ರತಿಭಟನಾ ನಿರತ ಯುವ ರೈತ ಸಾವು | ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಂದ ಪೊಲೀಸರೊಂದಿಗೆ ಘರ್ಷಣೆ | ಮೆರವಣಿಗೆ ಮುಂದೂಡಿಕೆ |

Share

ರೈತರ ಪ್ರತಿಭಟನೆ(Farmer Protest) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ(Central Govt) ರೈತರ ಬೇಡಿಕೆಗಳಿಗೆ ಒಪ್ಪಿಕೊಳ್ಳುವವರೆಗೆ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ. ನಿನ್ನೆ ಹರಿಯಾಣದ ಖಾನೌರಿ ಗಡಿಯಲ್ಲಿ (Haryana Khanauri border) ಪ್ರತಿಭಟನಾ ನಿರತ ರೈತರೊಬ್ಬರು ಸಾವನ್ನಪ್ಪಿದ್ದು, ಪೊಲೀಸರೊಂದಿಗೆ(Police) ರೈತರು (Farmers) ಘರ್ಷಣೆಗಿಳಿದಿದ್ದಾರೆ.

Advertisement
Advertisement
Advertisement

23 ವರ್ಷದ ಶುಭಕರಣ್ ಸಿಂಗ್ ಮೃತ ರೈತ. ಇವರು ಬಟಿಂಡಾ ನಗರದ ನಿವಾಸಿಯಾಗಿದ್ದಾರೆ. ಪೊಲೀಸರು (Haryana Police) ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಧರಣಿ, ಸತ್ಯಾಗ್ರಹ ಮುಂದುವರಿಯಲಿದ್ದರೂ ಎರಡು ದಿನಗಳ ಕಾಲ ದೆಹಲಿಗೆ ಬರುವ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.

Advertisement

ಮೃತ ರೈತನಿಗೆ ಗುಂಡು ತಗುಲಿದೆ ಎಂದು ಪಟಿಯಾಲ ಆಸ್ಪತ್ರೆಯ (Patiyala Hospital) ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಿದ್ದು, ಮರಣೋತ್ತರ ಪರೀಕ್ಷಾ ವರದಿಗೆ ಕಾಯಲಾಗುತ್ತಿದೆ. ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆತರುತ್ತಿದ್ದ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ವಿವರಗಳನ್ನ ಮರಣೋತ್ತರ ಪರೀಕ್ಷೆಯ ಬಳಿಕವೇ ನೀಡಲಾಗುತ್ತದೆ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
A protesting farmer has died in the Khanauri border of Haryana, and the farmers have clashed with the police. 23-year-old Shubkaran Singh is a deceased farmer. He is a resident of Bathinda city. It is said that the police (Haryana Police) were following various measures including tear gas to disperse the farmers, at which time they opened fire.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…

4 hours ago

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

19 hours ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

3 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

3 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

3 days ago