Advertisement
MIRROR FOCUS

ನಾಳೆಯಿಂದ ದೆಹಲಿ ಚಲೋ ಆರಂಭ | 5 ವರ್ಷದ ಎಂಎಸ್‌ಪಿ ಪ್ರಸ್ತಾವನೆಗೆ ಒಪ್ಪದ ಕೇಂದ್ರದ ವಿರುದ್ಧ ರೈತರ ಪಾದಯಾತ್ರೆ |

Share

ʻದೆಹಲಿ ಚಲೋʼ(Delhi Chalo) ರೈತರ ಪ್ರತಿಭಟನೆಯ(Farmer Protest) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಾದ್ಯಂತ ರೈತರು ದೆಹಲಿಯಲ್ಲಿ(Delhi) ಜಮಾವಣೆಗೊಂಡಿದ್ದಾರೆ. ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಐದು ವರ್ಷಗಳವರೆಗೆ ಸರ್ಕಾರಿ ಸಂಸ್ಥೆಗಳಿಂದ ಎಂಎಸ್‌ಪಿ(MSP) ದರದಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಇದನ್ನು ‘ದೆಹಲಿ ಚಲೋ’ ಆಂದೋಲನದಲ್ಲಿ ಭಾಗವಹಿಸಿದ ರೈತ ಮುಖಂಡರು ಇದು ರೈತರ ಹಿತಾಸಕ್ತಿಯಲ್ಲ ಎಂದು ಹೇಳಿದ್ದು, ನಾವು ಬುಧವಾರ ಪಾದಯಾತ್ರೆ ಮಾಡುತ್ತೇವೆ ಎಂದು ಘೋಷಿಸಿದ್ದಾರೆ.

Advertisement
Advertisement
Advertisement
Advertisement

ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಅಥವಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಿ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಹೋಗಲು ನಮಗೆ ಅವಕಾಶ ಮಾಡಿಕೊಡಿ ಎಂದು ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

Advertisement

ರೈತ ಮುಖಂಡರೊಂದಿಗಿನ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ, ಮೂವರು ಕೇಂದ್ರ ಸಚಿವರ ಸಮಿತಿಯು ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ರೈತರಿಂದ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಗೆ ಖರೀದಿ ಮಾಡಲಾಗುವುದು, ಈ ಖರೀದಿಯು ಸರ್ಕಾರದ ಏಜೆನ್ಸಿಗಳ ಮೂಲಕ ನಡೆಯುತ್ತದೆ ಹಾಗೂ ಖರೀದಿ ವಿಚಾರವಾಗಿ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂಬ ಪ್ರಸ್ತಾವವನ್ನು ಕೇಂದ್ರವು ರೈತರ ಮುಂದೆ ಇರಿಸಿತ್ತು. ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಇದು MSPಗಾಗಿರುವ ರೈತರ ಬೇಡಿಕೆಯನ್ನು ದಿಕ್ಕು ತಪ್ಪಿಸುವ ಮತ್ತು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಆದ್ದರಿಂದ  ಸ್ವಾಮಿನಾಥನ್ ಆಯೋಗದ ವರದಿಯಲ್ಲಿ ಇರುವ ಶಿಫಾರಸಿನ ಅನುಷ್ಠಾನದ ಹೊರತಾಗಿ ಯಾವುದಕ್ಕೂ ಒಪ್ಪುವುದಿಲ್ಲ ಎಂದು ಹೇಳಿದೆ.

‘ದೆಹಲಿ ಚಲೋ’ ಪಾದಯಾತ್ರೆಯ ನೇತೃತ್ವ ವಹಿಸಿರುವ ಎಸ್‌ಕೆಎಂ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ಎರಡು ವೇದಿಕೆಗಳಲ್ಲಿ ಚರ್ಚೆ ನಡೆಸಿದ ನಂತರ, ಕೇಂದ್ರದ ಪ್ರಸ್ತಾವನೆಯು ಹಿತದೃಷ್ಟಿಯಿಂದ ಕೂಡಿಲ್ಲ ಎಂದು ನಿರ್ಧರಿಸಲಾಗಿದೆ. ನಾವು ಈ ಪ್ರಸ್ತಾಪವನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದ್ದಾರೆ. ದೆಹಲಿಗೆ ಪಾದಯಾತ್ರೆ ಮುಂದುವರಿಯಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್, ನಾವು ಫೆಬ್ರವರಿ 21ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿಯುತವಾಗಿ ದೆಹಲಿಗೆ ಪ್ರತಿಭಟನಾ ಮರವಣಿಗೆಯನ್ನು ತೆರಳಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.

Advertisement

ಭಾನುವಾರ ರಾತ್ರಿ ರೈತ ಮುಖಂಡರೊಂದಿಗಿನ ಮಾತುಕತೆಯ ನಂತರ ಮಾತನಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಮತ್ತು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟದಂತಹ ಸಹಕಾರ ಸಂಘಗಳು ಹಲಸು, ಉದ್ದಿನಬೇಳೆ ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿವೆ. ದಾಲ್ ಅಥವಾ ಮೆಕ್ಕೆಜೋಳವನ್ನು ಮುಂದಿನ ಐದು ವರ್ಷಗಳವರೆಗೆ MSPಯಲ್ಲಿ ಖರೀದಿಸಲು ಒಪ್ಪಂದವನ್ನು ಮಾಡಿಕೊಳ್ಳಲಿದೆ.  ಇದಕ್ಕಾಗಿ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಲಾಗುವುದು, ಇದಲ್ಲದೆ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ರೈತರೊಂದಿಗೆ ಕಾನೂನು ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಎಂಎಸ್‌ಪಿ ದರದಲ್ಲಿ ರೈತರಿಂದ ಹತ್ತಿ ಖರೀದಿಸಲಿದೆ ಎಂದು ಗೋಯಲ್ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್‌ ಈ ಬಗ್ಗೆ ಮಾತನಾಡಿದ್ದು, ನಾನು ಒಬ್ಬ ವಕೀಲನಾಗಿ ಸಭೆಯಲ್ಲಿ ಪಾಲ್ಗೊಂಡಿದ್ದೇನೆ. ಕೇಂದ್ರದ ಪ್ರಸ್ತಾವದ ಕುರಿತು ಭಾಗಿದಾರರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಪ್ರತಿಭಟನೆ ವೇಳೆ ಶಾಂತಿ ಕಾಯ್ದುಕೊಳ್ಳಬೇಕು. ಗೋಧಿಗೆ ಬದಲಾಗಿ ಬೇರೆ ಬೆಳೆಗಳ ಕೃಷಿಗೆ ಮುಂದಾಗುವ ಉದ್ದೇಶವಿದೆ. ಆದರೆ, ಕೃಷಿ ಉತ್ಪನ್ನಗಳ ಬೆಲೆ ಎಂಎಸ್‌ಪಿಗಿಂತಲೂ ಕುಸಿದಾಗ ನಷ್ಟ ಅನುಭವಿಸುವ ಭೀತಿ ಇದೆ ಎಂದು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು.

Advertisement

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಕೇಂದ್ರವನ್ನು ಒತ್ತಾಯಿಸಲು ರೈತರು ಉದ್ದೇಶಿಸಿದ್ದ ‘ದೆಹಲಿ ಚಲೋ’ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ಪ್ರತಿಭಟನಾ ನಿರತ ರೈತರು ಹರಿಯಾಣ- ಪಂಜಾಬ್‌ನ ಗಡಿಯಲ್ಲಿರುವ ಶಂಭು ಮತ್ತು ಖಾನೌರಿ ಗಳಲ್ಲಿ ತಂಗಿದ್ದಾರೆ. ಎಂಎಸ್‌ಪಿ ಜಾರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ವಿದ್ಯುತ್‌ ದರ ಏರಿಕೆ ಬೇಡ, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರ, ಭೂಸ್ವಾಧೀನ ಕಾಯಿದೆ 2013ರ ಮರುಸ್ಥಾಪನೆ ಮತ್ತು 2020-21ರಲ್ಲಿ ಆಂದೋಲನದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರವನ್ನು ಕೂಡ ನೀಡಬೇಕು ಎಂದು ಆಗ್ರಹಿಸಿ ರೈತರು ದೆಹಲಿ ಚಲೋ ಹಮ್ಮಿಕೊಂಡಿದ್ದರು.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

8 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago