ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ | ಎಎಪಿ ಮುನ್ನಡೆ | ಬಿಜೆಪಿ ಹಾಗೂ ಎಎಪಿ ನಡುವೆ ಹೋರಾಟ |

December 7, 2022
11:49 AM

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಸದ್ಯ ಎಎಪಿ(AAP) ಮುನ್ನಡೆ ಸಾಧಿಸಿದೆ. ಮತ ಎಣಿಕೆ ಆರಂಭದಲ್ಲಿ ಬಿಜೆಪಿ(BJP) ಹಾಗೂ ಎಎಪಿ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. 

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ 4 ರಂದು ನಡೆದಿತ್ತು. ಶೇಕಡಾ 50.48 ರಷ್ಟು ಮತದಾನವನ್ನು ದಾಖಲಾಗಿತ್ತು.250 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಇಂದು ಮತ ಎಣೆಕೆ ಕಾರ್ಯ ನಡೆಯುತ್ತಿದೆ.ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿತ್ತು.ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ.

ಇದೀಗ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇಲ್ಲಿಯವರೆಗಿನ ಟ್ರೆಂಡ್‌ಗಳು ಬಿಜೆಪಿ ಮತ್ತು ಎಎಪಿ ನಡುವೆ ಸಮಬಲದ ಹೋರಾಟವನ್ನು ಹೇಳಿತ್ತು. ಇದೀಗ ಎಎಪಿ ಮುನ್ನಡೆ ಸಾಧಿಸುತ್ತಿದೆ. 70 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror