ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಸದ್ಯ ಎಎಪಿ(AAP) ಮುನ್ನಡೆ ಸಾಧಿಸಿದೆ. ಮತ ಎಣಿಕೆ ಆರಂಭದಲ್ಲಿ ಬಿಜೆಪಿ(BJP) ಹಾಗೂ ಎಎಪಿ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು.
ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ 4 ರಂದು ನಡೆದಿತ್ತು. ಶೇಕಡಾ 50.48 ರಷ್ಟು ಮತದಾನವನ್ನು ದಾಖಲಾಗಿತ್ತು.250 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಇಂದು ಮತ ಎಣೆಕೆ ಕಾರ್ಯ ನಡೆಯುತ್ತಿದೆ.ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿತ್ತು.ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ.
ಇದೀಗ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇಲ್ಲಿಯವರೆಗಿನ ಟ್ರೆಂಡ್‌ಗಳು ಬಿಜೆಪಿ ಮತ್ತು ಎಎಪಿ ನಡುವೆ ಸಮಬಲದ ಹೋರಾಟವನ್ನು ಹೇಳಿತ್ತು. ಇದೀಗ ಎಎಪಿ ಮುನ್ನಡೆ ಸಾಧಿಸುತ್ತಿದೆ. 70 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.