ಕಳೆದ ತಿಂಗಳಿಗೆ ಹೋಲಿಸಿದರೆ ಈ ವರ್ಷ ದೆಹಲಿಯಲ್ಲಿ ವಾಯು ಗುಣಮಟ್ಟ ತೀರಾ ಹದಗೆಟ್ಟಿದೆ. ಇದೀಗ ದೀಪಾವಳಿಯೂ ಸಮೀಪಿಸಿರುವುದರಿಂದ ಪಟಾಕಿಯಿಂದ ವಾಯುಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.
ಇದರ ಜೊತೆಗೆ ಗಾಳಿಯ ಗುಣಮಟ್ಟ ಕಡಿಮೆ ಇರುವ ನಗರಗಳಲ್ಲೂ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಂಭ್ರಮ ಸಂತೋಷಕ್ಕಾಗಿ ಪಟಾಕಿ ಹಚ್ಚಬೇಕೆ ಹೊರತು, ರೋಗ ಮತ್ತು ಸಾವನ್ನು ತರಲು ಅಲ್ಲ ಎಂದು ಅಭಿಪ್ರಾಯ ಪಟ್ಟಿರುವ ಎನ್ ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ದೇಶದ ಎಲ್ಲಾ ನಗರ ಮತ್ತು ಪಟ್ಟಣಗಳಿಗೆ ಅನ್ವಯಸಲಿದ್ದು, 2019ರಲ್ಲಿ ಮಾಲಿನ್ಯ ಹೆಚ್ಚಿದ್ದ ಪಟ್ಟಿಯಲ್ಲಿ ಸೇರಿದ್ದ ನಗರಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸೇರಿ ವಾಯುಮಾಲಿನ್ಯ ಹೆಚ್ಚಾಗಿ ಇರದ ಭಾಗಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ಕೂಡ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡುವುದಾಗಿ ಘೋಷಿಸಲಾಗಿದೆ.