Advertisement
ಸುದ್ದಿಗಳು

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ : ದೆಹಲಿಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಪಟಾಕಿ ಮಾರಾಟ, ಬಳಕೆ ನಿಷೇಧಕ್ಕೆ ಆದೇಶ

Share
ಭಾರತದ ರಾಜಧಾನಿ ನವದೆಹಲಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ನವೆಂಬರ್ 30ರವರೆಗೆ ಪಟಾಕಿ ನಿಷೇಧ ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್​ಜಿಟಿ) ಆದೇಶ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಆದೇಶ ಜಾರಿಯಾಗಲಿದ್ದು, ಇನ್ನು 20 ದಿನಗಳ ಕಾಲ ಪಟಾಕಿ ಮಾರಾಟ, ಬಳಕೆಯನ್ನು ನಿಷೇಧಿಸಲಾಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಈ ವರ್ಷ ದೆಹಲಿಯಲ್ಲಿ ವಾಯು ಗುಣಮಟ್ಟ ತೀರಾ ಹದಗೆಟ್ಟಿದೆ. ಇದೀಗ ದೀಪಾವಳಿಯೂ ಸಮೀಪಿಸಿರುವುದರಿಂದ ಪಟಾಕಿಯಿಂದ ವಾಯುಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಇದರ ಜೊತೆಗೆ ಗಾಳಿಯ ಗುಣಮಟ್ಟ ಕಡಿಮೆ ಇರುವ ನಗರಗಳಲ್ಲೂ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಂಭ್ರಮ ಸಂತೋಷಕ್ಕಾಗಿ ಪಟಾಕಿ ಹಚ್ಚಬೇಕೆ ಹೊರತು, ರೋಗ ಮತ್ತು ಸಾವನ್ನು ತರಲು ಅಲ್ಲ ಎಂದು ಅಭಿಪ್ರಾಯ ಪಟ್ಟಿರುವ ಎನ್ ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ದೇಶದ ಎಲ್ಲಾ ನಗರ ಮತ್ತು ಪಟ್ಟಣಗಳಿಗೆ ಅನ್ವಯಸಲಿದ್ದು, 2019ರಲ್ಲಿ ಮಾಲಿನ್ಯ ಹೆಚ್ಚಿದ್ದ ಪಟ್ಟಿಯಲ್ಲಿ ಸೇರಿದ್ದ ನಗರಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸೇರಿ ವಾಯುಮಾಲಿನ್ಯ ಹೆಚ್ಚಾಗಿ ಇರದ ಭಾಗಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ಕೂಡ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡುವುದಾಗಿ ಘೋಷಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

11 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

18 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

18 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

18 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

2 days ago