ದೆಹಲಿ ಆರೋಗ್ಯ ಸಚಿವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ | ನಕಲಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದ ಎಎಪಿ |

May 30, 2022
11:05 PM

ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ. 8 ವರ್ಷಗಳ ಹಿಂದಿನ ಮುಗಿದ ಪ್ರಕರಣದಲ್ಲಿ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಸುಮಾರು 8 ವರ್ಷಗಳ ಹಿಂದಿನ ಕೇಸ್‌ ಇದಾಗಿದ್ದು ಸತ್ಯೇಂದ್ರ ಜೈನ್‌ ಅವರು ಅಧಿಕಾರಿಯಾಗಿದ್ದಾಗ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ  ಜಾರಿ ನಿರ್ದೇಶನಾಲಯ ಬಂಧಿಸಿದೆ.  ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡರು,  ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಹೇಳಿದೆ.ಜೈನ್ ಅವರನ್ನು ಹಿಮಾಚಲ ಪ್ರದೇಶ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಏಳು ಬಾರಿ ಇಡಿ ಮುಂದೆ ಹಾಜರಾಗಿದ್ದರು, ಸಿಬಿಐ ಅವರಿಗೆ ಕ್ಲೀನ್ ಚಿಟ್ ನೀಡಿದೆ, ಆದರೆ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಈ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ ಎಎಪಿ ಮುಖಂಡ ಮನೀಶ್‌ ಸಿಸೋಡಿಯಾ, ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದೆ. ಇದು ನಕಲಿಯಾಗಿದ್ದು ಈವರೆಗೆ ಹಲವು ಬಾರಿ ಇಡಿ ಕರೆ ಮಾಡಿದೆ. ಆದರೂ ಈ ಪ್ರಕರಣದಲ್ಲಿ ಏನೂ ಸಿಗದ ಕಾರಣ ಕೆಲ ದಿನಗಳಿಂದ ಇಡಿ ಕರೆ ಮಾಡುವುದನ್ನು ನಿಲ್ಲಿಸಿತ್ತು. ಈಗ ಮತ್ತೆ ಶುರುವಾಗಿದೆ. ಏಕೆಂದರೆ ಅವರು ಹಿಮಾಚಲ ಪ್ರದೇಶ ಚುನಾವಣೆಯ ಉಸ್ತುವಾರಿಯಾಗಿದ್ದಾರೆ ಎಂದು  ಟ್ವೀಟ್ ಮಾಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror