#Arecanut | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆಗೆ ಒತ್ತಾಯ

June 26, 2023
3:22 PM

ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.

Advertisement
Advertisement
Advertisement

ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.

Advertisement

ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror