ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…