ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ಶನಿವಾರ ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಚುನಾವಣೆಯ ಹೊತ್ತಿನಲ್ಲಿ ಕೃಷಿಕರ ಕೋವಿ ಡಿಪಾಸಿಟ್ ಇಡುವುದನ್ನು ವಿನಾಯತಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಲಾಯಿತು.
ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಡಿಪಾಸಿಟ್ ಇಡಲು ಇಲಾಖೆಗಳಿಂದ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಗೆ ನೀಡುವ ಕೋವಿಯನ್ನು ಚುನಾವಣೆಯ ಹೊತ್ತಿನಲ್ಲಿ ಡಿಪಾಸಿಟ್ ಇಡುವುದು ಸೂಕ್ತವಲ್ಲ. ಅದೂ ಅಲ್ಲದೆ ಇಲಾಖೆಗಳಿಗೂ ಇದೊಂದು ಹೊರೆಯಾಗಿದೆ. ಕೃಷಿ ರಕ್ಷಣೆಯ ಉದ್ದೇಶದಿಂದ ಬಳಕೆಯಾಗುವ ಕೋವಿಯ ಮೂಲಕ ಚುನಾವಣೆಯ ಸಮಯದಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಒಂದು ವೇಳೆ ಯಾವುದಾದರೂ ಅನಾಹುತಗಳು ನಡೆದರೆ ಅಂತಹ ವ್ಯಕ್ತಿಗಳ ಕೋವಿ ಲೈಸನ್ಸ್ ರದ್ದು ಮಾಡಲು ಅವಕಾಶ ಇದೆ. ಈಗ ಚುನಾವಣೆಯ ಸಮಯದಲ್ಲಿ ಕೋವಿ ಡಿಪಾಸಿಟ್ ಕೃಷಿಕರಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೋವಿ ಡಿಪಾಸಿಟಿಗೆ ವಿನಾಯಿತಿ ನೀಡಬೇಕಲು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಅಡಿಕೆ ಬೆಳೆಗಾರರ ಸಂಘದಿಂದಲೂ ಬೆಂಬಲ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ದಯಾನಂದ ಕೋಟೆ ಹಾಗೂ ಬಿ ಟಿ ನಾರಾಯಣ ಭಟ್ ಅವರನ್ನು ಗೌರವಿಸಲಾಯಿತು. ಅಡಿಕೆ ಬೆಳೆಗಾರರ ಸಂಘದ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹಾಗೂ ಕೃಷಿಕ ಎ ಪಿ ಸದಾಶಿವ ಗೌರವಿಸಿದರು.
ಸಂಘದ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಂಡಿಸಿದರು.ಸಂಘದ ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ ಅಡಿಕೆ ಬೆಳೆಗಾರರ ಸಂಘದ ಬೈಲಾ ತಿದ್ದುಪಡಿ ಬಗ್ಗೆ ಮಾತನಾಡಿದರು. ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ವಂದಿಸಿದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…