ರಾಜ್ಯದ ರೈತರಿಗೆ ಬಾಕಿ ಇರುವ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬಾಕಿ ಇರುವ ಯೂರಿಯಾ ರಸಗೊಬ್ಬರವನ್ನು ತಕ್ಷಣವೇ ಪೂರೈಸುವಂತೆ ಒತ್ತಾಯಿಸಿದ್ದಾರೆ. 2025-26 ನೇ ಸಾಲಿಗೆ ರಾಜ್ಯವು 114.40 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು ಬಿತ್ತನೆ ಗುರಿ ಹೊಂದಿದೆ. ಜೊತೆಗೆ 160.68 ಲಕ್ಷ ಟನ್ ಆಹಾರ ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ. ಹಿಂಗಾರು ಋತುವಿನಲ್ಲಿ ಗೊಬ್ಬರಗಳಿಗೆ ಅಂದಾಜು ಬೇಡಿಕೆ 26.77 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದ್ದು,3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊರತೆಯಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

