ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಉಂಟಾಗಿದೆ ಎಂದು ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕೋಲಾರ-ಚಿಕ್ಕಬಳ್ಳಾಪುರ ಹಾಲೂ ಒಕ್ಕೂಟ ವಿಭಜನೆಯಾಗಿರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಚಿಕ್ಕಬಳ್ಳಾಪುರ ಒಕ್ಕೂಟಕ್ಕೆ ಶೀರ್ಘದಲ್ಲೇ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳ ಪೈಕಿ ಕೋಲಾರ ಒಕ್ಕೂಟ ಉತ್ಪಾದನೆಯಲ್ಲಿ ಮೊದಲ ಸ್ಥಾನ ಪಡೆದೆಕೊಂಡಿದ್ದು, ಮುಂಬರುವ ದಿನಗಳಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ನಂಜೇಗೌಡ ಹೇಳಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement