ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲ : ಬೇಡಿಕೆ ಈಡೇರದ ಹಿನ್ನೆಲೆ ಸರಕಾರಿ ಶಿಕ್ಷಕರಿಂದ ಪ್ರತಿಭಟನೆ : ಶಿಕ್ಷಕರ ಗೈರು-ತರಗತಿ ವ್ಯತ್ಯಯ

August 12, 2024
12:50 PM

ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರವನ್ನು ಮನವಿ ಮಾಡಿದ್ದರು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನ  ಫ್ರೀಡಂ ಪಾರ್ಕ್‌ನಲ್ಲಿ (Freedom park) ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka State Primary School Teachers’ Association) ಪ್ರತಿಭಟನೆ ನಡೆಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ (Protest) ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ. ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಬೇಡಿಕೆ ಏನು?
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು

Advertisement
Advertisement

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |
September 19, 2024
10:42 PM
by: ದ ರೂರಲ್ ಮಿರರ್.ಕಾಂ
ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |
September 19, 2024
9:17 PM
by: ದ ರೂರಲ್ ಮಿರರ್.ಕಾಂ
ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ
September 19, 2024
9:00 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |
September 19, 2024
8:53 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror