ಕಬ್ಬು ಕಟಾವು ಯಂತ್ರಗಳ ಪ್ರಾತ್ಯಕ್ಷಿಕೆ, ವಿತರಣೆ | ಸಚಿವ ಎನ್. ಚಲುವರಾಯಸ್ವಾಮಿ ಭಾಗಿ

November 19, 2024
7:28 PM

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಳತೂರು ಗೇಟ್ ಬಳಿ ಆಯೋಜಿಸಿದ್ದ ಕಬ್ಬು ಕಟಾವು ಯಂತ್ರಗಳ ಪ್ರಾತ್ಯಕ್ಷಿಕೆ ಮತ್ತು ವಿತರಣಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.

Advertisement
Advertisement

ಈ ಸಂದರ್ಭ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಕೃಷಿ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಸರ್ಕಾರ ಹಲವು ತರಬೇತಿ ಮತ್ತು ಸಂಶೋಧನಾ ಕೇಂದ್ರಗಳನ್ನು ತೆರೆದು ವಿಚಾರ ವಿನಿಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.  ಹೆಚ್ಚಿನ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಸರ್ಕಾರ ಸಬ್ಸಿಡಿ ನೀಡುತ್ತಿದೆ. ಇದರಿಂದ ಅನ್ನದಾತರ ಆದಾಯ ಹೆಚ್ಚಿಸಲು ಸಹಕಾರಿ ಎಂದರು.

ಶಾಸಕ ಕೆ.ಎಂ.ಉದಯ್, ಹಲವು ಕಾರಣಗಳಿಂದ ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗುತ್ತಿದ್ದು, ಅದನ್ನು ನೀಗಿಸಲು ಕೃಷಿ ಯಂತ್ರೋಪಕರಗಳನ್ನು ಬಳಕೆ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್,  ಕಬ್ಬು ಕಟಾವು ಯಂತ್ರವನ್ನು ಖರೀದಿಸುವ ರೈತರು ಮತ್ತು ಸಂಘ ಸಂಸ್ಥೆಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಕಬ್ಬು ಕೃಷಿಯಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡುವುದರಿಂದ ಕಾರ್ಮಿಕರ ಕೊರತೆಯನ್ನು ನೀಗಿಸಬಹುದು ಜೊತೆಗೆ ಕಬ್ಬು ಇಳುವರಿಯನ್ನು ಹೆಚ್ಚಿಸಿಕೊಳ್ಳಲು ಸಹಕಾರಿ ಎಂದರು.

ರೈತ ರಮೇಶ್ ಮಾತನಾಡಿ, ಇತ್ತೀಚೆಗೆ ಕೃಷಿ ಕಾರ್ಮಿಕರ ಕೊರತೆ ಹೆಚ್ಚಿದೆ. ಕಬ್ಬು ಕಟಾವಿನಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

Advertisement

ಶಾಸಕ ರವಿಕುಮಾರ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು. ಇದೇ ವೇಳೆ ಕೃಷಿ ಸಂಚಯವನ್ನು ಬಿಡುಗಡೆ ಮಾಡಿ. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group