ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಳತೂರು ಗೇಟ್ ಬಳಿ ಆಯೋಜಿಸಿದ್ದ ಕಬ್ಬು ಕಟಾವು ಯಂತ್ರಗಳ ಪ್ರಾತ್ಯಕ್ಷಿಕೆ ಮತ್ತು ವಿತರಣಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಕೃಷಿ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಸರ್ಕಾರ ಹಲವು ತರಬೇತಿ ಮತ್ತು ಸಂಶೋಧನಾ ಕೇಂದ್ರಗಳನ್ನು ತೆರೆದು ವಿಚಾರ ವಿನಿಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಹೆಚ್ಚಿನ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಸರ್ಕಾರ ಸಬ್ಸಿಡಿ ನೀಡುತ್ತಿದೆ. ಇದರಿಂದ ಅನ್ನದಾತರ ಆದಾಯ ಹೆಚ್ಚಿಸಲು ಸಹಕಾರಿ ಎಂದರು.
ಶಾಸಕ ಕೆ.ಎಂ.ಉದಯ್, ಹಲವು ಕಾರಣಗಳಿಂದ ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗುತ್ತಿದ್ದು, ಅದನ್ನು ನೀಗಿಸಲು ಕೃಷಿ ಯಂತ್ರೋಪಕರಗಳನ್ನು ಬಳಕೆ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಕಬ್ಬು ಕಟಾವು ಯಂತ್ರವನ್ನು ಖರೀದಿಸುವ ರೈತರು ಮತ್ತು ಸಂಘ ಸಂಸ್ಥೆಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಕಬ್ಬು ಕೃಷಿಯಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡುವುದರಿಂದ ಕಾರ್ಮಿಕರ ಕೊರತೆಯನ್ನು ನೀಗಿಸಬಹುದು ಜೊತೆಗೆ ಕಬ್ಬು ಇಳುವರಿಯನ್ನು ಹೆಚ್ಚಿಸಿಕೊಳ್ಳಲು ಸಹಕಾರಿ ಎಂದರು.
ರೈತ ರಮೇಶ್ ಮಾತನಾಡಿ, ಇತ್ತೀಚೆಗೆ ಕೃಷಿ ಕಾರ್ಮಿಕರ ಕೊರತೆ ಹೆಚ್ಚಿದೆ. ಕಬ್ಬು ಕಟಾವಿನಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ಶಾಸಕ ರವಿಕುಮಾರ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು. ಇದೇ ವೇಳೆ ಕೃಷಿ ಸಂಚಯವನ್ನು ಬಿಡುಗಡೆ ಮಾಡಿ. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…