ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

June 3, 2025
11:01 PM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ. ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೆ ಕಾರಣವಾಗಬಹುದಾದ ಡೆಂಗ್ಯೂ ಜ್ವರದ ಬಗ್ಗೆ ಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.  2024ರಲ್ಲಿ ಒಟ್ಟು 534 ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು. ಈ ಬಾರಿಯೂ ಪ್ರಕರಣಗಳು ಹೆಚ್ಚುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror