ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ. ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೆ ಕಾರಣವಾಗಬಹುದಾದ ಡೆಂಗ್ಯೂ ಜ್ವರದ ಬಗ್ಗೆ ಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. 2024ರಲ್ಲಿ ಒಟ್ಟು 534 ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು. ಈ ಬಾರಿಯೂ ಪ್ರಕರಣಗಳು ಹೆಚ್ಚುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…