ರಾಜ್ಯದಲ್ಲಿ ಡೆಂಗ್ಯು ಪ್ರಕರಣ ಶೇ. 60 ರಷ್ಟು ಹೆಚ್ಚಳ | ಸೊಳ್ಳೆಗಳ ನಿಯಂತ್ರಣಕ್ಕೆ ಗಪ್ಪಿ ಮೀನು ಪ್ರಯೋಗ | ಇದು ಲಾರ್ವಾ ತಿಂದು ಬದುಕುವ ಜಲಚರ

June 27, 2024
1:18 PM

ರಾಜ್ಯಾದ್ಯಂತ ಮಳೆಗಾಲ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು ಪ್ರಕರಣಗಳು(Dengue case) ಹೆಚ್ಚಾಗುತ್ತಲೇ ಇದೆ. 2023 ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯು ಪ್ರಕರಣಗಳಲ್ಲಿ ಸುಮಾರು ಶೇ. 60 ರಷ್ಟು ಹೆಚ್ಚಳವನ್ನು ರಾಜ್ಯ ಆರೋಗ್ಯ ಇಲಾಖೆ(Health department) ದಾಖಲಿಸಿದೆ. ಜೂನ್ 2023ರವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 2,003ರಷ್ಟಿತ್ತು. ಅದು ಈ ವರ್ಷದಲ್ಲಿ 4,886ಕ್ಕೆ ಏರಿಕೆಯಾಗಿದೆ.  ಡೆಂಗ್ಯು ರೋಗಕ್ಕೆ ಕಾರಣವಾಗುವ ಸೊಳ್ಳೆಯ(Mosquito) ಉತ್ಪತ್ತಿ ನಿಯಂತ್ರಣಕ್ಕೆ ಇದೀಗ ಶಿವಮೊಗ್ಗ ಆರೋಗ್ಯ ಇಲಾಖೆ ಅಧಿಕಾರಿಗಳು ಗಪ್ಪಿ ಮೀನಿನ(Guppy Fish) ಬಳಕೆಗೆ ಮುಂದಾಗಿದ್ದಾರೆ.

Advertisement
Advertisement
Advertisement

ಶಿವಮೊಗ್ಗ ಜಿಲ್ಲೆಯಲ್ಲಿ ಸದ್ಯ ಡೆಂಗ್ಯು ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಜಿಲ್ಲೆಯ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲಿ ಡೆಂಗ್ಯುನಿಂದ ಬಳಲುತ್ತಿರುವವರು ಭಾರೀ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಜೊತೆಗೆ ಡೆಂಗ್ಯು ಹರಡುವ ಸೊಳ್ಳೆ ಉತ್ಪತ್ತಿ ನಿಯಂತ್ರಣಕ್ಕೆ ಆಡಳಿತ ಗಮನ ಹರಿಸಿದೆ. ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿಕೊಂಡರೆ ಈ ಬಾರಿ ಡೆಂಗ್ಯು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಬಾರಿ ಜೂನ್‌ 20ವರೆಗೆ ಕೇವಲ 83 ಪ್ರಕರಣಗಳು ದಾಖಲಾಗಿದ್ದವು. ಈ ಬಾರಿ ಡೆಂಗ್ಯು ಪ್ರಕರಣಗಳ ಸಂಖ್ಯೆ 236ಕ್ಕೆ ಏರಿಕೆಯಾಗಿದೆ.

Advertisement

ಸೊಳ್ಳೆ ಉತ್ಪತ್ತಿ ನಿಯಂತ್ರಣ: ಹೀಗಾಗಿ ಡೆಂಗ್ಯು ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಜಿಲ್ಲೆಯ ಆರೋಗ್ಯ ಇಲಾಖೆ ಗಪ್ಪಿ ಮೀನುಗಳನ್ನು ಬೆಳೆಸುವ ಪ್ರಯೋಗಕ್ಕೆ ಮುಂದಾಗಿದೆ. ಗಪ್ಪಿ ಮೀನು ಬೆಳೆಸಿ ಸೊಳ್ಳೆಗಳ ಲಾರ್ವಾ ನಿಯಂತ್ರಿಸುವ ಪ್ರಯೋಗಕ್ಕೆ ಮುಂದಾಗಿದ್ದು, ಗಾತ್ರದಲ್ಲಿ ಚಿಕ್ಕದಾಗಿರುವ ಗಪ್ಪಿ ಫಿಶ್‌ಗಳು ಲಾರ್ವಾಗಳನ್ನು (ಸೊಳ್ಳೆಯ ಮೊಟ್ಟೆ) ತಿಂದು ಬದುಕುವ ಜಲಚರಗಳಾಗಿವೆ. ಗಪ್ಪಿ ಫಿಶ್‌ಗಳು ಹೇರಳವಾಗಿ ಬೆಳೆಯುವ ನೀರಿನಲ್ಲಿ ಸೊಳ್ಳೆಗಳ ಲಾರ್ವಾ ಇರಲು ಸಾಧ್ಯವಿಲ್ಲ. ಇದರಿಂದ ಸೊಳ್ಳೆಗಳ ಉತ್ಪತ್ತಿ ಗಣನೀಯವಾಗಿ ನಿಯಂತ್ರಣವಾಗುತ್ತದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಲಾರ್ವಾ ಸಮೀಕ್ಷೆಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಗ್ರಾಪಂ ಸದಸ್ಯರ ಹಾಗೂ ಸಾರ್ವಜನಿಕರ ಸಭೆ ನಡೆಸಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವಾರಕ್ಕೊಮ್ಮೆ ಜ್ವರ ಹಾಗೂ ಲಾರ್ವಾ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

Advertisement

ವಾರಕ್ಕೊಮ್ಮೆ ಡ್ರೈ ಡೇ: ಜಿಲ್ಲೆಯಲ್ಲಿ ಸೊಳ್ಳೆಯಲ್ಲಿ ನಿಯಂತ್ರಣದ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೂ ಕಾರ್ಯಾಗಾರದ ಮೂಲಕ ಡೆಂಗ್ಯು ಪ್ರಕರಣ ಹಾಗೂ ಸೊಳ್ಳೆ ನಿಯಂತ್ರಣದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಡೆಂಗ್ಯು ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಜಿಲ್ಲೆಯ ಆರೋಗ್ಯ ಇಲಾಖೆ ಗಪ್ಪಿ ಮೀನುಗಳನ್ನು ಬೆಳೆಸುವ ಪ್ರಯೋಗ ಒಂದೆಡೆಯಾದರೆ ಇನ್ನೊಂಡೆ ವಾರಕ್ಕೊಮ್ಮೆ ಡ್ರೈ ಡೇ ಮೂಲಕವೂ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಚಿಂತಿಸಲಾಗಿದೆ.

ಏನಿದು ಡ್ರೈ ಡೇ?: ವಾರದಲ್ಲಿ ಒಂದು ಮನೆಯಲ್ಲಿರುವ ತೊಟ್ಟೆ, ಡ್ರಮ್‌ಗಳು ಸೇರಿದಂತೆ ಇತರೆ ನೀರು ಸಂಗ್ರಹಿಸುವ ಸ್ಥಳಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಒಂದು ದಿನ ಒಣಗಲು ಬಿಟ್ಟು ಮರು ದಿನ ನೀರನ್ನು ತುಂಬಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದಲೂ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದು ಎನ್ನುವುದು ಅಧಿಕಾರಿಗಳ ಮಾಹಿತಿ.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |
January 19, 2025
7:03 AM
by: The Rural Mirror ಸುದ್ದಿಜಾಲ
ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror