ಈ ಬಾರಿ ಅಂತ ಮಳೆ ಬಾರದೇ ಹೋದರೂ, ಮಳೆಗಾಲದಲ್ಲಿ ಬರುವಂತ ಸಾಂಕ್ರಾಮಿಕ ರೋಗಗಳಿಗೇನು ಕಮ್ಮಿ ಇಲ್ಲ. ಅದರಲ್ಲೂ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.
ಡೆಂಗ್ಯೂಗೆ 7 ಜನ ಸಾವು: ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…