Advertisement
MIRROR FOCUS

#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

Share

ಈ ಬಾರಿ ಅಂತ ಮಳೆ ಬಾರದೇ ಹೋದರೂ, ಮಳೆಗಾಲದಲ್ಲಿ ಬರುವಂತ ಸಾಂಕ್ರಾಮಿಕ ರೋಗಗಳಿಗೇನು ಕಮ್ಮಿ ಇಲ್ಲ. ಅದರಲ್ಲೂ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಡೆಂಗ್ಯೂಗೆ 7 ಜನ ಸಾವು:  ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಸೆ.7 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು. ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

3 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

5 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

5 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

6 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago