#Dengue | ಎಲ್ಲೆಲ್ಲೂ ಡೆಂಗ್ಯೂ ಭೀತಿ | ಬಿಳಿರಕ್ತ ಕಣಗಳಿಗೆ ಹೆಚ್ಚಿದ ಬೇಡಿಕೆ | ರಕ್ತದಾನ ಶಿಬಿರಕ್ಕೆ ಮುಂದಾದ ಬ್ಲಡ್ ಬ್ಯಾಂಕ್‍ಗಳು |

September 19, 2023
9:39 AM
ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ.

ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್‌ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್‌ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್‍ಗಳಿಗೂ ಸಂಕಷ್ಟ ಎದುರಾಗಿದೆ.

ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.

ಈ ಹಿಂದೆ ದಿನಕ್ಕೆ 10-12ರಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್‍ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್‍ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror