ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್‍ಗಳಿಗೂ ಸಂಕಷ್ಟ ಎದುರಾಗಿದೆ.
ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.
ಈ ಹಿಂದೆ ದಿನಕ್ಕೆ 10-12ರಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್‍ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್‍ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…