ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ಪ್ರತೀ ವರ್ಷ ಜೂ.20 ಒ ಒಳಗಡೆ ರೈತರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗೆ ಪ್ರೀಮಿಯಂ ತುಂಬಲು ಬರುತ್ತಿತ್ತು. ಆದರೆ ಈ ಬಾರಿ ಇದುವರೆಗೂ ಈ ಯೋಜನೆ ಜಾರಿಯಾಗಿಲ್ಲ. ಹೀಗಾಗಿ ತಕ್ಷಣವೇ ಸಂಬಂಧಿತ ಇಲಾಖೆಗಳು ಕಾರ್ಯನಿರ್ವವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘವು ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಮಾಡಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ತಿಳಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದೂ ಒತ್ತಾಯಿಸಿದ್ದಾರೆ. ಈ ಬಾರಿಯ ಪ್ರಖರ ಬಿಸಲಿಗೆ ಅಡಿಕೆ, ತೆಂಗು ಸೇರಿದಂತೆ ಹಲವು ಕೃಷಿಗಳು ಒಣಗಿದೆ. ಹಲವಾರು ಮಂದಿಗೆ ಕೃಷಿ ನಾಶವಾಗಿದೆ. ಅದರ ಜೊತೆಗೆ ಜೂನ್ ತಿಂಗಳ ಅಂತ್ಯವಾದರೂ ಸಾಕಷ್ಟು ಮಳೆಯೂ ಆಗಿಲ್ಲ. ಹೀಗಾಗಿ ದ ಕ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel