ರಾಜ್ಯದಲ್ಲಿ ಖಾಲಿ ಇರುವ ಮೂರು ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರದಿಂದ ವಿದ್ಯುತ್ ಖರೀದಿಸಲಾಗಿದೆ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೃಷಿ ಪಂಪ್‌ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel